March 14, 2026

ಕಕ್ಕಿಂಜೆ: ಸರಕಾರಿ ಶಾಲೆ ಮಕ್ಕಳ ಮೇಲೆ ಹೆಜ್ಜೇನು ದಾಳಿ: 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥ

0
image_editor_output_image-728453397-1739863134794.jpg

ಬೆಳ್ತಂಗಡಿ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿದ್ದು, ಈ ವೇಳೆ ಕೆಲವು ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಕೂಗು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ.

ಹಜ್ಜೇನು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಶಾಲೆಯ ಸುತ್ತ ಹೆಜ್ಜೇನುಗಳು ಇನ್ನೂ ಸುತ್ತಾಡುತ್ತಿದ್ದು, ಸ್ಥಳೀಯರು ಬೆಂಕಿ ಹೊಗೆ ಹಾಕಿ ಅವುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹೆಜ್ಜೇನು ದಾಳಿ ಹಿನ್ನಲೆ ಶಾಲೆಗೆ ರಜೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!