March 14, 2026

ನೇಪಾಳಿ ವಿಧ್ಯಾರ್ಥಿನಿ ಆತ್ಮಹತ್ಯೆ

0
image_editor_output_image-837426844-1739863628416.jpg

ಭುವನೇಶ್ವರ: ವಿಧ್ಯಾರ್ಥಿಯೊಬ್ಬನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಶರಣಾದ ಭುವನೇಶ್ವರದಲ್ಲಿನ ಕಳಿಂಗಾ ಕೈಗಾರಿಕಾ ತಂತ್ರಜ್ಞಾನ ಸಂಸ್ಥೆಯಲ್ಲಿ ಕಲಿಯುತ್ತಿದ್ದ ನೇಪಾಳಿ ವಿಧ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಪ್ರಧಾನಿ ರಾಯಭಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

KIITಯಲ್ಲಿ ಮೂರನೇ ವರ್ಷದಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ನೇಪಾಳಿ ವಿದ್ಯಾರ್ಥಿನಿ ಪ್ರಕೃತಿ ಲಾಮ್ರಾಲ್ ಭಾನುವಾರ ಸಂಜೆ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಘಟನೆಯಿಂದ KIITಯಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ನ್ಯಾಯಕ್ಕಾಗಿ ಆಗ್ರಹಿಸಿ 500 ಕ್ಕೂ ಹೆಚ್ಚು ನೇಪಾಳಿ ವಿದ್ಯಾರ್ಥಿಗಳು ಸಂಸ್ಥೆಯ ವಿರುದ್ಧ ಭಾನುವಾರ ರಾತ್ರಿಯೇ ದಿಢೀರ್ ಪ್ರತಿಭಟನೆ ನಡೆಸಲು ಮುಂದಾಗಿದ್ದರು.

Leave a Reply

Your email address will not be published. Required fields are marked *

error: Content is protected !!