ಕುದುರೆ ಏರಿ ಮದುವೆ ಮಂಟಪಕ್ಕೆ ಬರುತ್ತಿದ್ದಾಗ ಹೃದಯಾಘಾತದಿಂದ ವರ ಸಾವು

ಮಧ್ಯಪ್ರದೇಶ: ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಶಿಯೋಪುರದಲ್ಲಿ ಶುಕ್ರವಾರ ವರದಿಯಾಗಿದೆ.
ಮೃತರನ್ನು ಪ್ರದೀಪ್ ಜಾಟ್ ಎಂದು ಗುರುತಿಸಲಾಗಿದ್ದು, ಇವರು NSUI ನ ಶಿಯೋಪುರ್ ಜಿಲ್ಲೆಯ ಅಧ್ಯಕ್ಷರಾಗಿದ್ದರು. ಹಿರಿಯ ಕಾಂಗ್ರೆಸ್ ನಾಯಕ ಯೋಗೇಶ್ ಜಾಟ್ ಅವರ ಸೋದರಳಿಯ. ಮೃತ ಪ್ರದೀಪ್ ಮದುವೆ ಸಂಭ್ರಮದಲ್ಲಿ ಕುದುರೆ ಏರಿ ಮಂಟಪಕ್ಕೆ ಬರುತ್ತಿದ್ದರು, ಇವರ ಸುತ್ತ ಸಂಬಂಧಿಕರು ಸಂತೋಷದಿಂದ ಡ್ಯಾನ್ಸ್ ಮಾಡುತ್ತಿದ್ದರು, ಈ ವೇಳೆ ಏಕಾಏಕಿ ಕುದುರೆಯ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರು ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.