ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು 5 ವರ್ಷದ ಮಗಳನ್ನು ಕೊಂದು ನೇಣಿಗೆ ಶರಣಾದ ಗ್ರಾಮ ಪಂಚಾಯಿತಿ ಅಧ್ಯಕ್ಷೆ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಹಿಳೆಯೊಬ್ಬರು ತನ್ನ ಐದು ವರ್ಷ ಪ್ರಾಯದ ಮಗುವನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ರಾಮಯ್ಯ ಲೇಔಟ್ ಈ ಘಟನೆ ನಡೆದಿದ್ದು, ಮೃತರನ್ನು ಶ್ರುತಿ ಎಂದು ಗುರುತಿಸಲಾಗಿದೆ.
ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಡೆತ್ನೋಟ್ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.
10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ನು ಒಂದು ಗಂಡು ಮಗು ಸಹ ಇದೆ. ಆದ್ರೆ, ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾರೆ.