May 3, 2026

ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದ ಪುತ್ರ

0
image_editor_output_image-1265609341-1739873161200.jpg

ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಲೈಗೈದಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಮೃತ ತಂದೆಯನ್ನು ಮಾಜಿ ಸೈನಿಕ ಚನ್ನಬಸಪ್ಪ (61) ಎಂದು ಗುರುತಿಸಲಾಗಿದ್ದು, ನಿವೃತ್ತಿ ಬಳಿಕ ನೈಸ್ ರಸ್ತೆಯಲ್ಲಿ ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ಅಮಿತ್ (21) ಎಂದು ತಿಳಿಯಲಾಗಿದೆ.

ಯಾವುದೇ ಕೆಲಸಕ್ಕೆ ಹೋಗದೇ ಎಣ್ಣೆ, ಮಾದಕ ವಸ್ತುವಿನ ದಾಸನಾಗಿದ್ದ ಅಮಿತ್‌ಗೆ ತಂದೆ ಬುದ್ಧಿವಾದ ಹೇಳುತ್ತಿದ್ದರು. ಇದೇ ವಿಚಾರವಾಗಿಯೂ ಪ್ರತಿ ದಿನ ಅಪ್ಪ ಮಗನ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ನೆರೆಹೊರೆಯವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!