ಮಂಗಳೂರು: ಮೀನು ಸಾಗಾಟದ ವಾಹನದಲ್ಲಿ ಗಾಂಜಾ: 119 ಕೆ.ಜಿ. ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಹಾಗೂ ಕೇರಳಕ್ಕೆ 119 ಕೆಜಿ ಗಾಂಜಾ ಸಾಗಿಸಲು ಯತ್ನಿಸುತ್ತಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ, 119 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಾಸರಗೋಡು ಜಿಲ್ಲೆ ನಿವಾಸಿ ಮೊಯ್ದಿನ್ ಶಬ್ಬಿರ್ (38), ಆಂದ್ರಪ್ರದೇಶ ನಿವಾಸಿ ಮಹೇಶ್ ದ್ವಾರಿಕಾನಾಥ ಪಾಂಡೆ(30), ಕೇರಳ ರಾಜ್ಯದ ಅಜಯ್ ಕೃಷ್ಣ(33), ಹರಿಯಾಣ ರಾಜ್ಯದ ಜೀವನ್ ಸಿಂಗ್(35) ಎಂದು ಗುರುತಿಸಲಾಗಿದೆ.
ಆರೋಪಿಗಳು 17-02-2025 ರಂದು ಮಂಗಳೂರು ನಗರಕ್ಕೆ ಅಂಧ್ರಪ್ರದೇಶ ರಾಜ್ಯದಿಂದ ಟಾಟಾ 407 ಗೂಡ್ಸ್ ಟೆಂಪೋ ವಾಹನದಲ್ಲಿ ಹಾಗೂ ಮಾರುತಿ ಅಲ್ಲೋ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ಮಿತ್ತಕೋಡಿ ಎಂಬಲ್ಲಿ 2 ವಾಹನಗಳನ್ನು ಪತ್ತೆ ಹಚ್ಚಿ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಮಾಡಿದ್ದಾರೆ. ಬಂಧಿತರಿಂದ 35 ಲಕ್ಷ ಮೌಲ್ಯದ 119 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.




