ಬೈಕ್‌ನಲ್ಲಿ ಶ್ರೀಗಂಧ ಮರದ ತುಂಡುಗಳ ಸಾಗಣೆ: ಇಬ್ಬರು ಆರೋಪಿಗಳ ಬಂಧನ
ಹೊಸನಗರ: ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕ್‌ನಲ್ಲಿ ಸಾಗಣೆ ಮಾಡುತ್ತಿದ್ದ ಇಬ್ಬರು ಶ್ರೀಗಂಧ ಕಳ್ಳರನ್ನು ಶನಿವಾರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಹೊಸಕೆಸರೆ ಗ್ರಾಮದ ಸೊಪ್ಪಿನಮಲ್ಲೆ ನಿವಾಸಿ ದಿನೇಶ್ ಅಲಿಯಾಸ್ ವಿಜೇತ (31) ಮತ್ತು ಹಿರಿಯೋಗಿ ಗ್ರಾಮದ ಮಾವಿನಕಟ್ಟೆಯ ರಾಘವೇಂದ್ರ (32) ಬಂಧಿತರು.
ಹೊಸಕೆಸರೆ ಗ್ರಾಮದ ನೀರೇರಿ ನಿವಾಸಿ ಎಂ.ಭದ್ರಪ್ಪ ಅಲಿಯಾಸ್ ಕರಿಮಂಜ (32) ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಂದ 18 ಕೆ.ಜಿ. ಶ್ರೀಗಂಧ ಹಾಗೂ ಸಾಗಣೆಗೆ ಬಳಸುತ್ತಿದ್ದ 3 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.




