March 15, 2026

ಆನ್ಲೈನ್ ಬೆಟ್ಟಿಂಗ್‌: ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ಸಾವು

0
image_editor_output_image1253787388-1739908597029.jpg

ಮೈಸೂರು: ಐಪಿಎಲ್ ಹಾಗೂ ಆನ್ಲೈನ್ ಬೆಟ್ಟಿಂಗ್‌ಗೆ ಮಹಿಳೆ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ನಗರದ ಹೊರವಲಯದ ಹಂಚ್ಯಾ ಗ್ರಾಮದ ಬಳಿ ನಡೆದಿದೆ.

ಹಂಚ್ಯಾ ಗ್ರಾಮದ ಜೋಶಿ ಆಂಥೋನಿ, ಜೋಬಿ ಆಂಥೋನಿ, ಶರ್ಮಿಳಾ ಅಲಿಯಾಸ್ ಸ್ವಾತಿ ಮೃತ ದುರ್ದೈವಿಗಳು. ಜೋಬಿ ಆಂಥೋನಿ ಹಾಗೂ ಜೋಷಿ ಆಂಥೋನಿ ಸಹೋದರರು. ಜೋಶಿ ಆಂಥೋನಿ ತನ್ನ ತಮ್ಮನಾದ ಜೋಬಿ ಆಂಥೋನಿ ಮತ್ತು ನಾದಿನಿ ಶರ್ಮಿಳಾ ಆಲಿಯಾಸ್ ಸ್ವಾತಿ ಮೇಲೆ ಮೋಸದ ಆರೋಪ ಹೊರಿಸಿ ನಿನ್ನೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಯುವ ಮುನ್ನ ಜೋಶಿ ಆಂಥೋನಿ ವಿಡಿಯೋ ಮಾಡಿದ್ದು, “ಸಹೋದರ ಜೋಬಿ, ಆತನ ಪತ್ನಿ ಶರ್ಮಿಳಾ ಮೋಸದಿಂದ ನನ್ನ ಸಹೋದರಿ ಮೂಲಕ ಊರು ತುಂಬ ಸಾಲ ಪಡೆದು ಮೋಸ ಮಾಡಿದ್ದಾರೆ. ನನ್ನ ಸಹೋದರಿಗೆ ಗಂಡ ಇಲ್ಲ, ಅವರು ಮೋಸ ಮಾಡಿದ್ದಾರೆ. ನನ್ನ ಸಾವಿಗೆ ತಮ್ಮ ಜೋಬಿ ಆಂಥೋನಿ ಮತ್ತು ಆತನ ಪತ್ನಿ ಶರ್ಮಿಳಾ ಕಾರಣ. ಅವರಿಗೆ ಶಿಕ್ಷೆ ಕೊಡಿಸಿ” ಎಂದು ವಿಡಿಯೋದಲ್ಲಿ ಹೇಳಿ ನೇಣಿಗೆ ಶರಣದಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!