ಕಾರವಾರ: ನೌಕಾನೆಲೆಯ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ: ಆರೋಪಿಗಳಾದ ವೇತನ ತಾಂಡೇಲ್, ಅಕ್ಷಯ್ ನಾಯ್ಕ್ ಬಂಧನ
ಕಾರವಾರ: ಇಲ್ಲಿನ ನೌಕಾನೆಲೆಯ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ ಆರೋಪದ ಮೇಲೆ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ದ ಅಧಿಕಾರಿಗಳು ಬಂಧಿಸಿದ್ದಾರೆ.
ಜಿಲ್ಲೆಯ ಮುದುಗಾ ಗ್ರಾಮದ ವೇತನ ತಾಂಡೇಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್ ಬಂಧಿತ ಆರೋಪಿಗಳಾಗಿದ್ದಾರೆ.
ಇಬ್ಬರ ಬಗ್ಗೆ ಮಾಹಿತಿ ಕಲೆಹಾಕಿದ್ದ ಎನ್‌ಐಎ ತಂಡ ನಿನ್ನೆ ಕಾರವಾರಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.
ನೌಕಾನೆಲೆಯ ಮಾಹಿತಿ ಸೋರಿಕೆ ವಿಚಾರವಾಗಿ ೨೦೨೪ರ ಆಗಸ್ಟ್ ತಿಂಗಳಲ್ಲಿ ಮೂವರನ್ನು ವಿಚಾರಣೆ ನಡೆಸಿದ್ದ ಎನ್ಐಎ ನೋಟೀಸ್ ನೀಡಿತ್ತು. ಮುದುಗಾದ ವೇತನ್ ತಾಂಡೇಲ್, ತೋಡೂರಿನ ಸುನೀಲ್ ಹಾಗೂ ಹಳವಳ್ಳಿಯ ಅಕ್ಷಯ್ ನಾಯ್ಕ್‌ನನ್ನು ವಿಚಾರಣೆ ನಡೆಸಿ ಬಿಡುಗಡೆ ಮಾಡಿತ್ತು. ಇದೀಗ ಮತ್ತೆ ಪ್ರಕರಣ ಸಂಬಂಧ ಮತ್ತೆ ತನಿಖೆ ನಡೆಸಲು ಬಂದಿದ್ದ ಎನ್‌ಐಎ ತಂಡ ಇಬ್ಬರನ್ನು ಬಂಧಿಸಿದೆ.




