ಆಕ್ಸಿಸ್ ಬ್ಯಾಂಕ್‌ನಲ್ಲಿ ನಕಲಿ ಬಂಗಾರ ಇಟ್ಟು ಬ್ಯಾಂಕ್ ಸಿಬ್ಬಂದಿಯಿಂದಲೇ 19 ಲಕ್ಷ ರೂ. ವಂಚನೆ

ಬಳ್ಳಾರಿ: ನಕಲಿ ಬಂಗಾರ ಇಟ್ಟು ಬ್ಯಾಂಕ್ ಸಿಬ್ಬಂದಿಯಿಂದಲೇ 19 ಲಕ್ಷ ರೂ. ವಂಚನೆ ಎಸಗಿದ ಘಟನೆ ಸಿರುಗುಪ್ಪ ಪಟ್ಟಣದ ಆಕ್ಸಿಸ್ ಬ್ಯಾಂಕ್‌ನಲ್ಲಿ ನಡೆದಿದ್ದು ಮೂವರು ಬ್ಯಾಂಕ್ ಸಿಬ್ಬಂದಿ ವಿರುದ್ದ ಕೇಸ್ ದಾಖಲಾಗಿದೆ.
ಅಡಮಾನ ವಿಭಾಗದ ಮುಖ್ಯಸ್ಥ ಕಾರ್ತಿಕ್, ಶ್ರೀನಿವಾಸ್ ಮತ್ತು ಅಕ್ಕಸಾಲಿಗ ರಾಮನಗೌಡ ವಿರುದ್ಧ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಳೆದ ವರ್ಷ ಈ ಮೂವರು ಆರೋಪಿಗಳು ಸಿರುಗುಪ್ಪ ಆಕ್ಸಿಸ್ ಬ್ಯಾಂಕ್‌ನಿಂದ ವರ್ಗಾವಣೆಯಾಗಿದ್ದಾರೆ. ವರ್ಗಾವಣೆಯಾಗಿ ಒಂದು ವರ್ಷದ ಬಳಿಕ ಮೋಸ ಮಾಡಿರುವುದು ಬೆಳಕಿಗೆ ಬಂದಿದೆ.