ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಲ್ಲೆ ಪ್ರಕರಣದ ಆರೋಪಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸಿಕ್ಕಿದ ಸುಳಿವು ಆಧರಿಸಿ, ಮಡಿವಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಫಾರೂಕ್ ಅಲಿಯಾಸ್ ಮೋಟಿ ಬಂಧಿತ ಆರೋಪಿ.
ಮಗನ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಆರೋಪಿ ಕಾಣಿಸಿಕೊಂಡಿದ್ದ. ಅದನ್ನು ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಒಂಬತ್ತು ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. 12 ವರ್ಷಗಳ ಹಿಂದೆ ನಡೆದಿದ್ದ ಹಲ್ಲೆ ಪ್ರಕರಣವೊಂದರಲ್ಲಿ ಮೊಹಮ್ಮದ್ ಫಾರೂಕ್ ಆರೋಪಿ. 2015ರಲ್ಲಿ ಮೊಹಮ್ಮದ್ ಫಾರೂಕ್ ವಿರುದ್ಧ ನ್ಯಾಯಾಲಯವು ವಾರಂಟ್ ಜಾರಿಗೊಳಿಸಿತ್ತು. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಫಾರೂಕ್ ತಲೆಮರೆಸಿಕೊಂಡಿದ್ದ. ಆರೋಪಿ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.