ಮೂಡಿಗೆರೆ: ಬೈಕ್, ಕಾರು ಮುಖಾಮುಖಿ ಢಿಕ್ಕಿ: ಬೈಕ್ ಸವಾರ ಗಂಭೀರ

ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ಮಂಗಳವಾರ(ಫೆ.18) ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸುಜೀತ್ ಎಂಬವರ ತಲೆ ಹಾಗೂ ಕೈ ಕಾಲಿಗೆ ತೀವ್ರ ಪೆಟ್ಟಾಗಿದ್ದು ಕೂಡಲೇ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.ಪ್ರಕರಣ ದಾಖಲಾಗಿದೆ.