ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ: ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಾವು
ಹಾಸನ: ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತದಲ್ಲಿ ಹಾಸನ ಮೂಲದ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿ ಬಳಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ನಿತಿನ್(30) ಮೃತ ಯುವಕ. ಮೃತ ನಿತಿನ್ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ.
ಕುಟುಂಬಸ್ಥರ ಜೊತೆ ಕುಂಭಮೇಳಕ್ಕೆ ತೆರಳುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ನಿತಿನ್ ತಾಯಿ ಪುಷ್ಪ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.




