March 14, 2026

ಪ್ರವಾಸಕ್ಕೆ ತೆರಳಿದ್ದ ಟೆಕ್ಕಿ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸಾವು

0
image_editor_output_image1530689538-1740118022149.jpg

ಕಲಬುರಗಿ: ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ ಜೇವರ್ಗಿ ಮೂಲದ ಟೆಕ್ಕಿ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವಾಗ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿದ್ದಾನೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಲ್ಲೂರ್‌ಕೆ ಗ್ರಾಮದ ಸಂತೋಷ್ ಮಲ್ಲೆದ್ (34) ಮೃತ ಟೆಕ್ಕಿ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಂತೋಷ್, ಫೆ.15 ರಂದು ಸ್ನೇಹಿತರೊಂದಿಗೆ ಶ್ರೀಲಂಕಾದ ಕ್ಯಾಂಡಿಗೆ ಪ್ರವಾಸ ಕೈಗೊಂಡಿದ್ದರು. ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುತ್ತಿದ್ದಾಗ ತಲೆಗೆ ಪೆಟ್ಟು ಬಿದ್ದು ಸಂತೋಷ್ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!