ತಾಯಿಗೆ ಹಲ್ಲೆ ನಡೆಸಿದ ಪಿಎಸ್‌ಐ ಮಂಜುನಾಥ್ ಸೇವೆಯಿಂದ ಅಮಾನತು

ಬೆಂಗಳೂರು: ಅಕ್ರಮ ಸಂಬಂಧ ಪ್ರಶ್ನಿಸಿದ ತಾಯಿಯನ್ನು ಪ್ರೇಯಸಿ ಜತೆ ಸೇರಿ ಹಲ್ಲೆ ನಡೆಸಿದ ರಾಮ ಮೂರ್ತಿನಗರ ಠಾಣೆಯ ಪಿಎಸ್‌ಐ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಕೃತ್ಯಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿದೆ.
ಘಟನೆ ಸಂಬಂಧ ದೊಡ್ಡಬಳ್ಳಾಪುರ ನಿವಾಸಿ ಮಂಗಳಮ್ಮ ಎಂಬವರು ನೀಡಿದ ದೂರಿನ ಮೇರೆಗೆ ರಾಮಮೂರ್ತಿನಗರ ಠಾಣೆಯ ಪಿಎಸ್‌ಐ ಮಂಜುನಾಥ್ ಅವರ ಸ್ನೇಹಿತೆ ಬಸವಜ್ಯೋತಿ, ಈಕೆಯ ಸಹೋದರ ಬಸವ ಪ್ರಭು ಎಂಬವರ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು, ಪಿಎಸ್‌ಐ ಮಂಜುನಾಥ್‌ನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.