ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆಗೆ “ಯುನಿವರ್ಸಲ್ ಮೀಡಿಯಾ ಅವಾರ್ಡ್”
ಮಂಗಳೂರು: ಇಂಟರ್‌ನ್ಯಾಶನಲ್ ಕಲ್ಬರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಯುನಿವರ್ಸಲ್ ಮೀಡಿಯಾ ಅವಾರ್ಡ್ 2025ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಭಾಜನರಾಗಿದ್ದಾರೆ.
ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅವರ ಸಾಧನೆಯನ್ನು ಗುರುತಿಸಿ ದುಬ್ಬಾಯಲ್ಲಿ ಫೆ. 24ರಂದು ನಡೆಯುವ 47ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಹಾಗೂ ಸಾಂಸ್ಕೃತಿಕ ವಿನಿಮಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ದುಬ್ಬಾ ಆಲ್ ಹಜ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಮೊಹಮ್ಮದ್ ಇಬ್ರಾಹಿಂ ಅಲ್ ಹಜ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.




