March 20, 2026

HSRP ನಂಬರ್ ಪ್ಲೇಟ್: ಮಾ.31ರೊಳಗೆ ಹೊಸ ನಂಬರ್ ಪ್ಲೇಟ್ ಅಳವಡಿಸಲು ಸೂಚನೆ

0
image_editor_output_image98213026-1740211871476.jpg

ಬೆಂಗಳೂರು : ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆ ಗಡುವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಏಪ್ರಿಲ್ 1, 2019ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಆಗಸ್ಟ್ 17, 2023ರಲ್ಲಿ ಅಧಿಸೂಚನೆ ಹೊರಡಿಸಿತ್ತು.

ಇನ್ನೂ ಬಹಳಷ್ಟು ವಾಹನ ಸವಾರರು ಎಚ್‌ಎಸ್‌ಆರ್‌ಪಿ ನಂಬ‌ರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿದ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.

ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್ 50 ಹಾಗೂ 51ರನ್ವಯ ಎಲ್ಲ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬ‌ರ್ ಪ್ಲೇಟ್‌ಗಳನ್ನು ಅಳವಡಿಕೆ ಮಾಡಬೇಕಿದೆ. ಕರ್ನಾಟಕದ ವಾಹಗಳಿಗೆ ಈ ನಿಯಮವನ್ನು ಕಡ್ಡಾಯ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!