ಚಾರ್ಮಾಡಿ ಘಾಟ್ ನಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಕಾರು:
ಪ್ರಾಣಾಪಾಯದಿಂದ ಪಾರು
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಬೆಂಕಿ ಹೊತ್ತಿ ಕಾರೊಂದು ಸುಟ್ಟು ಕರಕಲಾದ ಘಟನೆ ಭಾನುವಾರ ನಸುಕಿನ 2 ಗಂಟೆ ನಸುಕಿನ ಸಮಯದಲ್ಲಿ ನಡೆದಿದೆ.

ಮಂಗಳೂರಿನ ದೇರಳಕಟ್ಟೆಯಿಂದ ಜಾವಗಲ್ ಗೆ ಪ್ರವಾಸಕ್ಕೆ ತೆರಳುವಾಗದಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹೀಂದ್ರ ಲೋಗಾನ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಣಕಲ್ ಸಬ್ ಇನ್ಸ್ಪೆಕ್ಟರ್ ಗಾಯತ್ರಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





