ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ, ಸಹೋದರಿ ಶವವಾಗಿ ಪತ್ತೆ
ತಿರುವನಂತಪುರಂ: ಕೇಂದ್ರ ಅಬಕಾರಿ ಮತ್ತು ಜಿಎಸ್‌ಟಿ ಇಲಾಖೆಯ ಹೆಚ್ಚುವರಿ ಆಯುಕ್ತ, ಅವರ ತಾಯಿ ಹಾಗೂ ಸಹೋದರಿ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕೇರಳದಲ್ಲಿ ನಡೆದಿದೆ.
ಮನೀಶ್ ವಿಜಯ್ ಮೃತ ಅಧಿಕಾರಿ. ಮೂಲತಃ ಜಾರ್ಖಂಡ್ ಮೂಲದ ಮನೀಶ್ ವಿಜಯ್ ಕುಟುಂಬ ಕೇರಳದ ಎರ್ನಾಕುಲಂ ಜಿಲ್ಲೆಯ ಕಕ್ಕನಾಡ್ ಕಸ್ಟಮ್ಸ್ ಕ್ವಾಟ್ರಸ್‌ನಲ್ಲಿ ವಾಸಿಸುತ್ತಿದ್ದರು. ಮನೀಶ್ ವೈಯಕ್ತಿಕ ಕಾರಣಕ್ಕೆ ನಾಲ್ಕು ದಿನಗಳ ರಜೆ ತೆಗೆದುಕೊಂಡಿದ್ದರು.
ನಾಲ್ಕು ದಿನ ಕಳೆದ ಬಳಿಕವೂ ಕೆಲಸಕ್ಕೆ ಬಾರದ ಕಾರಣ ಮನೀಶ್ ಅವರ ಸಹೋದ್ಯಗಿಗಳು ಅವರ ಮನೆಗೆ ತೆರಳಿದ ಸಂದರ್ಭ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಸಹೋದ್ಯೋಗಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದು ಆತ್ಮಹತ್ಯೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.




