March 20, 2026

ವಿವಾದಿತ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಎಸ್‌ಡಿಪಿಐ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ಸಹಿ ಸಂಗ್ರಹ ಅಭಿಯಾನ

0
IMG-20250222-WA0007.jpg

ಬೆಳ್ತಂಗಡಿ: ಬ್ರಹ್ಮರಕೊಟ್ಲುವಿನಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಸದಾ ವಿವಾದಗಳಿಂದ ಕುಖ್ಯಾತಿ ಪಡೆದ ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಕೈಗೊಂಡ ಹೋರಾಟದ ಮುಂದುವರೆದ ಬಾಗವಾಗಿ ಸಹಿ ಸಂಗ್ರಹ ಅಭಿಯಾನ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನಾದ್ಯಂತ ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಸಹಿ ಸಂಗ್ರಹ ಅಭಿಯಾನ ಭಾಗವಾಗಿ ಬೆಳ್ತಂಗಡಿ ಮೂರು ಮಾರ್ಗ ಬಳಿ ಫ್ಲೆಕ್ಸ್ ಅಳವಡಿಸಿ ಸಹಿ ಸಂಗ್ರಹ ಮಾಡಲಾಯಿತು. ನ್ಯಾಯವಾದಿಗಳಾದ ಪ್ರಶಾಂತ್, ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರು ಉದ್ಯಮಿ ಪುಷ್ಪರಾಜ್ ಶೆಟ್ಟಿ, ಮಾನವ ಬಂದುತ್ವ ವೇದಿಕೆ ಜಿಲ್ಲಾಧ್ಯಕ್ಷರಾದ ಚನ್ನಕೇಶವ ಉಪಸ್ಥಿತರಿದ್ದರು.ವಾಹನ ಚಾಲಕರು, ಸಾರ್ವಜನಿಕರು ಸಹಿ ಹಾಕುವ ಮೂಲಕ ಹೋರಾಟಕ್ಕೆ ನೈತಿಕ ಬೆಂಬಲ ನೀಡಿದರು. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಮದ್ದಡ್ಕ, ಉಜಿರೆ ಟಿ.ಬಿ ಕ್ರಾಸ್, ಮಡಂತ್ಯಾರು ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಮಾಡಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ, ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ರಶೀದ್ ಬೆಳ್ತಂಗಡಿ, ಸ್ವಾಲಿ ಮದ್ದಡ್ಕ, ಅಶ್ರಫ್ ಕಟ್ಟೆ, ಸಹಲ್ ನಿರ್ಸಾಲ್, ಉಜಿರೆ ಬ್ಲಾಕ್ ಅಧ್ಯಕ್ಷರಾದ ಮಹಮ್ಮದ್ ಆಲಿ, ಫಝಲ್ ಉಜಿರೆ, ಮರ್ಷಾ ಉಜಿರೆ, ಸಾದಿಕ್ ಲಾಯಿಲ, ರಿಯಾಝ್ ಲಾಯಿಲ, ವೇಣೂರು ಬ್ಲಾಕ್ ಅಧ್ಯಕ್ಷರಾದ ಅಶ್ರಫ್ ಬದ್ಯಾರು, ಅಸ್ಲಾಂ ಮದ್ದಡ್ಕ, ಶಬೀರ್, ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ, ಹನೀಫ್ ಟಿ. ಎಸ್, ರೌಫ್ ಪುಂಜಾಲಕಟ್ಟೆ, ರಝಕ್ ಬಿ. ಎಂ, ರಫೀಕ್ ಕನ್ನಡಿಕಟ್ಟೆ, ಇಸ್ಮಾಯಿಲ್ ಬೆಳ್ತಂಗಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!