ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: ಮಗು ಸೇರಿ ಮೂವರಿಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದ್ದು, ಮಗು ಸೇರಿ ಮೂವರು ತೀವ್ರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೇಷ್ಟ್ರು ಮನೆ ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಶಿರಾದ ಗಿಡ್ಡನಹಳ್ಳಿಯಿಂದ ಯಲಹಂಕದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ.