ಹಾಸನ: ಮಹಿಳೆಯೊಬ್ಬರ ಮೇಲೆ ವಿದ್ಯುತ್ ಕಂಬ ಮುರಿದುಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಸಕಲೇಶಪುರದ ಗಾಳಿಗುಡ್ಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಾರದ (45) ಗಂಭೀರವಾಗಿ ಗಾಯಗೊಂಡ ಮಹಿಳೆ. ಅವರು ಮನೆಯಿಂದ ಹೊರಗೆ ಬಂದಿದ್ದ ವೇಳೆ ವಿದ್ಯುತ್ ಕಂಬ ಏಕಾಏಕಿ ಮುರಿದುಬಿದ್ದಿದೆ. ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.
