March 20, 2026

ಶ್ರೀ ಬೈಲಾಂಜನೇಯಸ್ವಾಮಿ ದೇವಾಲಯ, ಶ್ರೀ ಅಯ್ಯಪ್ಪ ದೇವಾಲಯದ ಹುಂಡಿ ಕಳವು

0
image_editor_output_image-140444646-1740344964239.jpg

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಇತಿಹಾಸ ಪ್ರಸಿದ್ಧ ಶ್ರೀ ಬೈಲಾಂಜನೇಯಸ್ವಾಮಿ ದೇವಾಲಯ ಮತ್ತು ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಕಳ್ಳರು ಹುಂಡಿ ಒಡೆದು ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.

ಬಾಗೇಪಲ್ಲಿ ಪಟ್ಟಣದಲ್ಲಿ ಎಸ್‌ಬಿ.ಎಂ.ರಸ್ತೆಗೆ ಹೊಂದಿಕೊಂಡಿರುವ ಬೈಲಾಂಜನೇಯಸ್ವಾಮಿ ದೇವಾಲಯದಲ್ಲಿ ಮಧ್ಯರಾತ್ರಿ ವೇಳೆ ಕಳ್ಳರು ದೇವಾಲಯದ ಆವರಣದ ಹಿಂಭಾಗದಿಂದ ಪ್ರವೇಶಿಸಿದ್ದಾರೆ. ಕಬ್ಬಿಣದ ಗೇಟ್‌ ಬೀಗ ಒಡೆದು ಹುಂಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!