March 20, 2026

ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image-253562620-1740382814932.jpg

ಹಾವೇರಿ: ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಗುರುತಿಸಲಾಗಿದೆ. ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಈಜಲು ತೆರಳಿದ್ದಾರೆ.

ನೀರಿಗಿಳಿದ ಸಂದರ್ಭ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೆರೆಯ ದಡದಲ್ಲಿ ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಕೆರೆಯಲ್ಲಿ ಬಾಲಕರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!