ಕಾರವಾರ: ಗುಡ್ಡ ಕುಸಿತ ಪ್ರಕರಣ: ಹೆದ್ದಾರಿ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರಿನಲ್ಲಿ ಜು.16 ರಂದು 11 ಜನರ ಸಾವಿಗೆ ಕಾರಣವಾಗಿದ್ದ ಗುಡ್ಡ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಕಂಪನಿಯ 8 ನಿರ್ದೇಶಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.
ಶಿರೂರು ದುರಂತಕ್ಕೆ ಅವೈಜ್ಞಾನಿಕ ಕಾಮಗಾರಿ ನಡೆಸಿದ್ದ ಕಂಪನಿಯೇ ಹೊಣೆ, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ದೂರು ದಾಖಲಿಸಿದ್ದರು.