March 14, 2025

ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯ ಚತುಷ್ಪಥ ವಿಸ್ತರಣೆಯ ಡಿಪಿಆರ್ಗೆ ರಾಜ್ಯ ಸರಕಾರ ಅನುಮತಿ

0

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯ ಚತುಷ್ಪಥ ವಿಸ್ತರಣೆಗೆ ಸಂಬಂಧಿಸಿ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರಕಾರದಿಂದ ಅನುಮತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಮಾಣಿ-ಸಂಪಾಜೆ ಹೆದ್ದಾರಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಕ್ಯಾ. ಚೌಟ ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿ.ಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆ‌ರ್ ಸಿದ್ಧಪಡಿಸಲು ಸಮಾಲೋಚಕರ ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ. ಜತೆಗೆ ಇದಕ್ಕೆ ತಗಲುವ ವೆಚ್ಚವಾದ 3.19 ಕೋಟಿ ರೂ. ಏಜೆನ್ಸಿ ವೆಚ್ಚದಡಿ ಭರಿಸುವುದಕ್ಕೆ ಅನುಮೋದನೆ ಕೂಡ ನೀಡಿ ಆದೇಶ ಹೊರಡಿಸಿದೆ.

 

 

Leave a Reply

Your email address will not be published. Required fields are marked *

error: Content is protected !!