March 20, 2026

ಮಂಗಳೂರು | MDMA ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರ ಬಂಧನ: 1,15,000 ಮೌಲ್ಯದ ಮಾದಕ ವಸ್ತು ಜಪ್ತಿ

0
image_editor_output_image992798523-1740427850286.jpg

ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನುಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

ಆರೋಪಿಗಳು ಗುಲ್ಬರ್ಗಾ ಜಿಲ್ಲೆ , ಉಮ್ಮರ್ ಕಾಲೊನಿ ಆಜಾದ್ ಪುರ ರೋಡ್ ಶೇಕ್ ಸಿಕಂದರ್(22), ಮಂಗಳೂರು ಕಾವೂರು ನಿವಾಸಿ ಮೊಹಮ್ಮದ್ ತೌಫೀಕ್(29), ಎಂದು ಗುರುತಿಸಲಾಗಿದೆ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ ಕೂಳೂರು ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು. 1,15,000 ಮೌಲ್ಯದ 23 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಸುಝುಕಿ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,10,000 ಅಂದಾಜಿಸಲಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!