ಕಾರ್ಕಳ: ನಾಲ್ವರು ನಕ್ಸಲರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಕಾರ್ಕಳ: ಕಳೆದ ತಿಂಗಳು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದಿದ್ದ 6 ಮಂದಿ ನಕ್ಸಲರ ಪೈಕಿ ನಾಲ್ವರನ್ನು ಫೆ. 25ರಂದು ಕಾರ್ಕಳ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಬಾಕಿ ಇರುವ ಪ್ರಕರಣಗಳ ತನಿಖೆ ಬಗ್ಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾರಪ್ಪ (ಜಯಣ್ಣ) ಲತಾ (ಮುಂಡಗಾರು ಲತಾ) ವನಜಾಕ್ಷಿ (ಜ್ಯೋತಿ) ಸುಂದರಿ (ಗೀತಾ, ಜೆನ್ನಿ)ಯನ್ನು ಪೊಲೀಸರು ಕಾರ್ಕಳ ನ್ಯಾಯಾಲಯಕ್ಕೆ ಕರೆತಂದರು.