ಮೂಲ್ಕಿ: ವಿಮಾನ ನಿಲ್ದಾಣಕ್ಕೆಂದು ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯ ಪಾವಂಜೆ ದೇವಸ್ಥಾನದ ತಿರುವಿನಲ್ಲಿ ಮಂಗಳವಾರ ಬೆಳಗ್ಗೆ 8.50ರ ಸುಮಾರಿಗೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಪಲ್ಟಿಯಾಗಿ ಬಿದ್ದಿದೆ.
ಕಾರಿನಲ್ಲಿದ್ದ ಮಹಿಳೆ ಲಾಸ್ಯಾ ಹೆಗ್ಡೆ ಅವರು ಉಡುಪಿಯಿಂದ ವಿಮಾನ ನಿಲ್ದಾಣಕ್ಕೆಂದು ಹೋಗುತ್ತಿದ್ದರು. ವೇಗದಲ್ಲಿದ್ದ ಕಾರು ಏಕಾಏಕಿ ಬ್ರೇಕು ಹಾಕಿದಾಗ ನಿಯಂತ್ರಣ ಕಳೆದುಕೊಂಡು ಉರುಳಿಬಿದ್ದಿದೆ. ಚಾಲಕಿ ಲಾಸ್ಯಾ ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರಿನ ಏರ್ ಬ್ಯಾಗ್ ತೆರೆದ ಪರಿಣಾಮ ಅಪಘಾತದ ತೀವ್ರತೆ ಕಡಿಮೆಯಾಗಿದೆ.