March 20, 2026

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಬಸ್

0
image_editor_output_image969542633-1740518146428.jpg

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದ ಘಟನೆ ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

error: Content is protected !!