ಮಂಗಳೂರು: ಆರೋಪಿಗಳ ಜೊತೆಗೆ ಸೆಲ್ಫಿ: ಉರ್ವ ಠಾಣೆಯ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಅಮಾನತು
ಮಂಗಳೂರು: ಸೈಬರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ತಿರುಗಾಟ ನಡೆಸಿದ್ದಲ್ಲದೆ ಅವನ ಜೊತೆ ಸೆಲ್ಫಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉರ್ವ ಠಾಣೆಯ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಘಟನೆ ಸಂಬಂಧ ಉರ್ವ ಠಾಣೆಯ ಇನ್‌ಸ್ಪೆಕ್ಟರ್ (ಭಾರತಿ) ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮಕೈಗೊಂಡಿದ್ದಾರೆ.
ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ಪಡೆದ ಸಂದರ್ಭದಲ್ಲಿ ಪೊಲೀಸರು ರಾಜಸ್ಥಾನಕ್ಕೆ ತೆರಳಿದಾಗ ಸೆಲ್ಪಿ ತೆಗೆದುಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆಯ ಹೊಣೆಯನ್ನು ಉರ್ವಾ ಇನ್ಸ್ ಪೆಕ್ಟರ್ ವಹಿಸಿಕೊಂಡಿದ್ದರು. ಈ ವೇಳೆ, ಬೆಂಗಳೂರು ಏರ್ ಪೋರ್ಟ್ ನಿಂದ ರಾಜಸ್ಥಾನದ ಜೈಪುರಕ್ಕೆ ಇತರೇ ಸಿಬಂದಿಯೊಂದಿಗೆ ವಿಮಾನದಲ್ಲಿ ತೆರಳಿದ್ದರು.




