ಬಸ್, ಕಾರು ನಡುವೆ ಭೀಕರ ಅಪಘಾತ: ಐವರು ಸಾವು

ತಿರುಚ್ಚಿ: ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವನಪ್ಪಿದ ಘಟನೆ ತಿರುಚ್ಚಿ-ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತಲೈ ಬಳಿ ಮುಂಜಾನೆ 2:15 ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಮೃತರು ಪ್ರಯಾಣಿಸುತ್ತಿದ್ದ ಕಾರು ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್‌ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅವಶೇಷಗಳಡಿ ಸಿಲುಕಿ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.