December 15, 2025

ವಾಮಾಚಾರ ಪ್ರಕರಣ| ಪ್ರಸಾದ್‌ ಅತ್ತಾವರ, ಆತನ ಪತ್ನಿ ಸಬ್ ಇನ್ ಸ್ಪೆಕ್ಟರ್ ತನಿಖೆಗೆ ಸಹಕರಿಸುತ್ತಿಲ್ಲ: ಪೊಲೀಸ್ ಕಮಿಷನರ್ ಅಗರ್ವಾಲ್‌ ಮಾಹಿತಿ

0
IMG-20250227-WA0000.jpg

ಮಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್‌ ಟಿಐ ಕಾರ್ಯಕರ್ತ ಗಂಗರಾಜು ಹಾಗೂ ಇತರ ಮೂವರ ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರ ಮತ್ತು ಆತನ ಪತ್ನಿಯಾಗಿರುವ ಉಡುಪಿಯ ಸಬ್‌ ಇನ್‌ಸ್ಪೆಕ್ಟರ್‌ ಸುಮಾಗೆ ಎರಡು ಬಾರಿ ನೋಟೀಸ್‌ ನೀಡಲಾಗಿದೆ. ಆದರೆ ಅವರಿಬ್ಬರೂ ಕೂಡ ತನಿಖೆಗೆ ಸಹಕರಿಸುತ್ತಿಲ್ಲ. ಇನ್ನೊಂದು ನೋಟಿಸ್‌ ನೀಡಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತನಿಖೆಗೆ ಸಂಬಂಧಿಸಿ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಆದರೆ ಅವರಿಬ್ಬರೂ ತನಿಖೆಗೆ ಸಹಕರಿಸುತ್ತಿಲ್ಲ. ಮತ್ತೊಮ್ಮೆ ನೋಟಿಸ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹೃದಯ ಕಾಯಿಲೆ ಇದೆ ಎಂದು ಹೇಳಿ ಪ್ರಸಾದ್ ಅತ್ತಾವರ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಯಲ್ಲಿರುವಾಗ ವಿಚಾರಣೆ ನಡೆಸಲಾಗಿತ್ತು. ಬಳಿಕ ಆತ ಜಾಮೀನು ಪಡೆದುಕೊಂಡು ಬೇರೆ ಕಡೆ ತಿರುಗಾಡುತ್ತಿದ್ದಾನೆ ಎಂದರು.

ಪ್ರಸಾದ್ ಅತ್ತಾವರ ಬಳಸಿರುವ ಸೊತ್ತುಗಳ ವಿಧಿವಿಜ್ಞಾನ ವಿಶ್ಲೇಷಣೆ ಮಾಡಲಾಗುತ್ತಿದೆ. ಉಡುಪಿಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ಪ್ರಸಾದ್ ಅತ್ತಾವರನ ಪತ್ನಿ ಸುಮಾ ಅವರಿಗೂ ನೋಟಿಸ್ ನೀಡಲಾಗಿದೆ. ಆದರೆ ಅವರು ಕರ್ತವ್ಯಕ್ಕೆ ರಜೆ ಹಾಕಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬಿಜೈಯ ಯುನಿಸೆಕ್ಸ್‌ ಸೆಲೂನೊಂದರಲ್ಲಿ ಜ.23ರಂದು ನಡೆದ ದಾಂಧಲೆಗೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ರಾಮಸೇನಾ ಸಂಸ್ಥಾಪಕ ಪ್ರಸಾದ್‌ ಅತ್ತಾವರನ ಮೊಬೈಲ್‌ ಪರಿಶೀಲನೆ ವೇಳೆ ದೇವಸ್ಥಾನವೊಂದರಲ್ಲಿ ಐದು ಕುರಿಗಳನ್ನು ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಇತರ ಕೆಲವರ ಫೋಟೋಗಳಿಗೆ ಹಾಗೂ ಅವರ ಹೆಸರಿನ ಚೀಟಿಗೆ ಹಚ್ಚಿ ಪೂಜೆ ಮಾಡುತ್ತಿರುವ ವೀಡಿಯೋ ಲಭ್ಯವಾಗಿತ್ತು. ಅದರಂತೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಪ್ರಸಾದ್‌ ಅತ್ತಾವರ ಹಾಗೂ ಬೆಂಗಳೂರಿನ ನಾಲ್ವರ ವಿಚಾರಣೆ ನಡೆಸಿದ್ದರು.

Leave a Reply

Your email address will not be published. Required fields are marked *

error: Content is protected !!