April 8, 2025

ಖರ್ಜೂರದಲ್ಲಿ ಬಚ್ಚಿಟ್ಟು ಚಿನ್ನ ಸಾಗಾಟ: 172 ಗ್ರಾಂ ತೂಕದ ಚಿನ್ನ ವಶಕ್ಕೆ ಪಡೆದ ಕಸ್ಟಮ್ಸ್‌ ಅಧಿಕಾರಿಗಳು

0

ನವದೆಹಲಿ: ಖರ್ಜೂರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 172 ಗ್ರಾಂ ತೂಕದ ಚಿನ್ನವನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಿಮಾನ ನಿಲ್ದಾಣದ ಗ್ರೀನ್ ಚಾನೆಲ್‌ನ ನಿರ್ಗಮನದಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದರು. ಆತನಿಂದ ಚಿನ್ನ ಎಂದು ಎನ್ನಲಾದ ವಿವಿಧ ಹಳದಿ ಲೋಹದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ಆತ ಖರ್ಜೂರದೊಳಗೆ ಬಚ್ಚಿಟ್ಟು ಸಾಗಿಸುತ್ತಿದ್ದ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!