ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್: ಕೆ.ಜಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ
ವಿಟ್ಲ: ಮಕ್ಕಳಲ್ಲಿ ಸ್ವಾವಲಂಬಿ ಬದುಕು, ಹೊಂದಾಣಿಕೆಯ ಬದುಕು ಮತ್ತು ಹಂಚಿ ತಿನ್ನುವ ಅಭ್ಯಾಸವನ್ನು ಬೆಳೆಸಬೇಕು. ಶಿಕ್ಷಕ ವಿದ್ಯಾರ್ಥಿ ಸಂಬಂಧ ಉತ್ತಮವಾಗಿರಬೇಕು ಎಂದು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು ನಿವೃತ್ತ ಪ್ರಾಂಶುಪಾಲರಾದ ಕ್ಸೇವಿಯರ್ ಡಿಸೋಜಾ ಶಾಲೆಯ ಯು.ಕೆ.ಜಿ ವಿದ್ಯಾರ್ಥಿಗಳಿಗೆ ನಡೆದ ಪದವಿ ಪ್ರಧಾನ ಕಾರ್ಯಕ್ರಮದಲ್ಲಿ ತಿಳಿಸಿದರು.


ಸಮಾರಂಭದ ಅಧ್ಯಕ್ಷತೆಯನ್ನು ವಿಟ್ಲ ಜಮಾಅತ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನಾ ವಹಿಸಿದ್ದರು. ವೇದಿಕೆಯಲ್ಲಿ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮೊಹಮ್ಮದ್ ಪೊನ್ನೊಟ್ಟು, ಟ್ರಸ್ಟ್ ಉಪಾಧ್ಯಕ್ಷ ವಿ.ಕೆ.ಯಂ ಅಶ್ರಫ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಮನಾಝೀರ್ ಮುಡಿಪು ಸ್ವಾಗತಿಸಿದರು. ಕಾರ್ಯದರ್ಶಿ ಅಬೂಬಕರ್ ನೋಟರಿ ಧನ್ಯವಾದಗೈದರು.
ಕಾರ್ಯಕ್ರಮದಲ್ಲಿ ವಿಟ್ಲ ಜುಮಾ ಮಸೀದಿ ಪದಾಧಿಕಾರಿಗಳು ಮತ್ತು ಟ್ರಸ್ಟ್‌ನ ಇತರ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆಯನ್ನು ಎಲ್.ಕೆ.ಜಿ ಯ ಪುಟಾಣಿ ವಿದ್ಯಾರ್ಥಿಗಳು ನಿರ್ವಹಿಸಿದ್ದು ಪೋಷಕರ ಗಮನ ಸೆಳೆಯಿತು.





