November 10, 2026

ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂ. ದೋಚಿದ ಪ್ರಕರಣ: ಬಜಾಲ್ ತಲ್ಲತ್‌ ಗ್ಯಾಂಗಿನ ಇಬ್ಬರ ಬಂಧನ

0
image_editor_output_image1380884620-1740772505769.jpg

ಮಂಗಳೂರು: ಅಂಕೋಲಾ ಬಳಿಯ ರಾಮನಗುಳಿ ಎಂಬಲ್ಲಿ ಮಂಗಳೂರಿಗೆ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿ ಒಂದೂವರೆ ಕೋಟಿ ರೂಪಾಯಿ ದೋಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರವಾರ ಪೊಲೀಸರು ಮಂಗಳೂರಿನ ತಲ್ಲತ್‌ ಗ್ಯಾಂಗಿನ ಇಬ್ಬರು ಸದಸ್ಯರನ್ನು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರಿನ ಜ್ಯುವೆಲ್ಲರಿ ಮಾಲೀಕ ರಾಜೇಶ ಪವಾರ್‌ ಎಂಬುವವರಿಗೆ ಸೇರಿದ್ದ ಕಾರು ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿ ದೊರಕಿದ್ದು, ಅದರಲ್ಲಿ 1.14 ಕೋಟಿ ನಗದು ಪತ್ತೆಯಾಗಿತ್ತು. ರಾಜೇಶ್‌ ಪವಾರ್‌ ಮತ್ತು ಕಾರಿನ ಚಾಲಕರು ಘಟನೆ ನಡೆದ ಕೆಲವು ದಿನಗಳ ಬಳಿಕ ಅಂಕೋಲಾ ಠಾಣೆಗೆ ತೆರಳಿ ದರೋಡೆ ಕುರಿತು ಪ್ರಕರಣ ದಾಖಲಿಸಿದ್ದರು.

ದರೋಡೆ ಕುರಿತು ತನಿಖೆ ಕೈಗೆತ್ತಿಕೊಂಡ ಪೊಲೀಸರು ಚಾಲಕರಿಬ್ಬರನ್ನು ಬಂಧನ ಮಾಡಿ ತನಿಖೆ ಮಾಡಿದಾಗ ಕೆಲವೊಂದು ಮಹತ್ವದ ಮಾಹಿತಿ ಹೊರಬಂದಿದೆ. ಮಂಗಳೂರು ಹೊರವಲಯದ ಅಡ್ಯಾರ್‌, ಬಜಾಲ್‌ನಲ್ಲಿ ಸಕ್ರಿಯವಾಗಿರುವ ತಲ್ಲತ್‌ ಗ್ಯಾಂಗ್‌ನ ಸದಸ್ಯರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!