ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ
ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದಿದೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ವಿಜಯೇಂದ್ರ ಅವರು ಸಾಮಾನ್ಯವಾಗಿ ಬಳಸುವ ಕಾರಿನ ಬದಲು ಇನ್ನೊಂದು ವಾಹನದಲ್ಲಿ ಪ್ರಯಾಣಿಸುತ್ತಿದ್ದರಿಂದ ಬಚಾವ್ ಆಗಿದ್ದಾರೆ. ಸದ್ಯ ಪೊಲೀಸರು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಅದೃಷ್ಟವಶಾತ್ ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.




