ಟಿಪ್ಪರ್, ಕಾರಿನ ನಡುವೆ ಮುಖಾಮುಖಿ ಢಿಕ್ಕಿ: ಐವರು ಸ್ಥಳದಲ್ಲೇ ಸಾವು
ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಐವರೂ ಸಹ ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ.





