November 10, 2026

ಉಡುಪಿ: ಬ್ರಹ್ಮಾವರ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಅವಘಡ: ಸ್ಪೋಟಗೊಂಡ ತ್ಯಾಜ್ಯ ಸಂಗ್ರಹ ಮಾಡುವ ವಾಹನ

0
image_editor_output_image-1901789252-1740858753856.jpg

ಉಡುಪಿ: ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹ ವಾಹನವೊಂದು ಸ್ಫೋಟಗೊಂಡಿದೆ ಎನ್ನಲಾಗಿದೆ. ಬೆಂಕಿಯು ಕೆನ್ನಾಲಗೆಗೆ ಎಸ್.ಎಲ್.ಆರ್.ಎಂ. ಘಟಕ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ಯಂತ್ರೋಪಕರಣಗಳು ಮತ್ತು ಉಪಕರಣಗಳಿಗೆ ಹಾನಿಯಾಗಿದೆ. ಮಲ್ಪೆ, ಉಡುಪಿ, ಕುಂದಾಪುರದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಮತ್ತು ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!