ಮಡಿಕೇರಿ: ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ
ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಫೆ.28 ರಂದು ಗಾಳಿಬೀಡು ಗ್ರಾಮದ ಗಣಪತಿ ದೇವಸ್ಥಾನದ ಸಮೀಪ ನಿಷೇಧಿತ ಮಾದಕ ವಸ್ತುವನ್ನು ಸರಬರಾಜು/ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಬೆಟ್ಟತ್ತೂರು ಗ್ರಾಮದ ನಿವಾಸಿ ಕಿರಣ್ ಕುಮಾರ್.ಜಿ.ಆರ್ (35) ಎಂಬಾತನನ್ನು 43 ಗ್ರಾಂ ಗಾಂಜಾ ನಿಷೇಧಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.




