February 1, 2026

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿ ಪರಾರಿ

0
image_editor_output_image-1856740535-1740859458668.jpg

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ.

ಉಡುಪಿಯ ಪ್ರಧಾನ ಸಿವಿಲ್ ನ್ಯಾಯಧೀಶರು ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಶಿರಸ್ತೇದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾ ಅವರ ವಾರಂಟ್ ಆರೋಪಿ ಅಶೋಕ ಎಂಬಾತನನ್ನು ಫೆ. 27ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಂಪತ್ ಅವರು ನಂದಕಿಶೋರ್ ಎಂಬವರೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ಆರೋಪಿಯು ನ್ಯಾಯಾಲಯದ ವಿಚಾರಣೆ ವೇಳೆ ಕೈತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!