December 19, 2025

ಸಿಖ್ ಧಾರ್ಮಿಕ ಧ್ವಜ ತೆಗೆಯಲು ಯತ್ನ ಆರೋಪ:
24 ಘಂಟೆಗಳಲ್ಲಿ ಎರಡನೇ ಹತ್ಯೆ

0
GoldenTemple.jpeg

ಪಂಜಾಬ್‌: ಸಿಖ್ ಧಾರ್ಮಿಕ ಧ್ವಜ ತೆಗೆಯಲು ಯತ್ನ ಆರೋಪ ಹಿನ್ನಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಪಂಜಾಬ್ ನಲ್ಲಿ ಇಬ್ಬರನ್ನು ಥಳಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಪಂಜಾಬ್‌ನ ಅಮೃತಸರದ ಗೋಲ್ಡನ್ ಟೆಂಪಲ್‌ನ ಗರ್ಭಗುಡಿಯಲ್ಲಿ ಅನಾಹುತ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದ ಒಂದು ದಿನದ ನಂತರ, ಕೋಪಗೊಂಡ ಜನಸಮೂಹವು ಅಪವಿತ್ರಗೊಳಿಸುವ ಪ್ರಯತ್ನದಿಂದ ಕಪುರ್ತಲಾದಲ್ಲಿ ಭಾನುವಾರದಂದು ವ್ಯಕ್ತಿಯೊಬ್ಬನನ್ನು ಕೊಂದ ಘಟನೆ ನಡೆದಿದೆ.

ಕಪುರ್ತಲಾ ಜಿಲ್ಲೆಯ ಗುರುದ್ವಾರದಲ್ಲಿ ಧಾರ್ಮಿಕ ಧ್ವಜವನ್ನು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಸಿಖ್ ಭಕ್ತರು ಓರ್ವ ವ್ಯಕ್ತಿಯನ್ನು ಹಿಡಿದು ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಮೃತಪಟ್ಟಿದ್ದಾನೆ.

ಕಪುರ್ತಲಾದ ನಿಜಾಂಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ. ಈ ವ್ಯಕ್ತಿ ನಿಜಾಂಪುರದ ಗುರುದ್ವಾರದಲ್ಲಿ ಸಿಖ್ಖರ ಧಾರ್ಮಿಕ ಧ್ವಜವಾದ ನಿಶಾನ್ ಸಾಹಿಬ್ ನನ್ನು ತೆಗೆದುಹಾಕಲು ಪ್ರಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಪೊಲೀಸರಿಗೆ ಒಪ್ಪಿಸಲು ನಿರಾಕರಿಸಿರುವ ಭಕ್ತರು ಚೆನ್ನಾಗಿ ಥಳಿಸಿದ್ದಾರೆ.

ಪೊಲೀಸರು ಮತ್ತು ಇತರ ಯಾವುದೇ ಏಜೆನ್ಸಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸಬಾರದು. ಇಂತಹ ಪ್ರಕರಣಗಳು ನಡೆಯಲು ಪಂಜಾಬ್ ಪೊಲೀಸರು ಮತ್ತು ರಾಜ್ಯ ಸರ್ಕಾರ ಜವಾಬ್ದಾರರಾಗಿರುತ್ತಾರೆ ಎಂದು ಗುರುದ್ವಾರದಿಂದ ಮಾಡಲಾದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶನಿವಾರ ಸಂಜೆ, ಅಮೃತಸರದ ಗೋಲ್ಡನ್ ಟೆಂಪಲ್‌ನೊಳಗೆ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್ ನನ್ನು ಅಪವಿತ್ರಗೊಳಿಸಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಹೊಡೆದು ಸಾಯಿಸಲಾಗಿದೆ.

ಅಮೃತಸರ ಪೊಲೀಸರು ಗೋಲ್ಡನ್ ಟೆಂಪಲ್ ಕಾಂಪ್ಲೆಕ್ಸ್ ಮತ್ತು ಸುತ್ತಮುತ್ತ ಕಟ್ಟೆಚ್ಚರ ವಹಿಸಿದ್ದಾರೆ.

ಶನಿವಾರ ಸಂಜೆ ಆರೋಪಿಯನ್ನು ಹೊಡೆದು ಕೊಂದ ಸ್ಥಳದಲ್ಲಿ ಯಾವುದೇ ಗುರುತಿನ ದಾಖಲೆಗಳು ಪತ್ತೆಯಾಗದ ಕಾರಣ ಪೊಲೀಸರು ಈಗ ಬಯೋಮೆಟ್ರಿಕ್ ಫಿಂಗರ್‌ಪ್ರಿಂಟ್ ಸ್ಕ್ಯಾನಿಂಗ್‌ ಮೂಲಕ ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!