December 16, 2025

ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಯುವಕ ಸಾವು

0
image_editor_output_image1607974973-1740948259076.jpg

ದಾವಣಗೆರೆ: ತುಂಗಾಭದ್ರಾ ನದಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಹಿರೇಕೇರೂರು ತಾಲೂಕಿನ ಹದರಿಹಳ್ಳಿಯ ನಾಗರಾಜ್ (26) ಎಂದು ಗುರುತಿಸಲಾಗಿದೆ. ಯುವಕ ಕುಟುಂಬದವರೊಂದಿಗೆ ಉಕ್ಕಡಗಾತ್ರಿ ಕರಿ ಬಸವೇಶ್ವರ ರಥೋತ್ಸವಕ್ಕೆ ಆಗಮಿಸಿದ್ದ. ಈ ವೇಳೆ ನದಿಗೆ ಇಳಿದು ಸ್ನಾನ ಮಾಡುವಾಗ ಈ ಅವಘಡ ಸಂಭವಿಸಿದೆ.

ಈ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!