ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್: ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯ ಬಂಧನ
ಬೆಳಗಾವಿ: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಕಿಡ್ನ್ಯಾಪ್ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು.




