March 5, 2026

ಹೊಸಂಗಡಿ: ಸೇತುವೆಯ ಕಂಬಕ್ಕೆ ಕಾರು ಢಿಕ್ಕಿ: ತಂದೆ, ಪುತ್ರ ಸಹಿತ ಮೂವರು ಮೃತ್ಯು

0
image_editor_output_image-1959630087-1741034096668.jpg

ಮಂಜೇಶ್ವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಹಳೆ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ.

ಮೃತರನ್ನು ಪೈವಳಿಕೆ ನಿವಾಸಿಗಳಾದ ಜನಾರ್ದನ ಅವರ ಪುತ್ರ ವರುಣ್ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ. ರತನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಹೊಸಂಗಡಿ ಹಳೆ ಚೆಕ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!