ಎರಡು ಬೈಕ್ ಮಧ್ಯೆ ಢಿಕ್ಕಿ: ಮೂವರು ಸಾವು
ರಾಯಚೂರು: ಎರಡು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್ ಬಳಿ ನಡೆದಿದೆ.
ಶಿವಪ್ಪ ಹುಸೇನಪ್ಪ(37), ಮೌನೇಶ್ ಮಹಾದೇವ(20) ಮತ್ತು ಹನುಮೇಶ(24) ಮೃತ ದುರ್ದೈವಿಗಳು. ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.
ಶಿವಪ್ಪ ತನ್ನ ಬೈಕ್‌ನಲ್ಲಿ ಸಿಂಧನೂರಿನಿಂದ ಬಸ್ಸಾಪುರ ಗ್ರಾಮಕ್ಕೆ ಹೋಗುತ್ತಿದ್ದರು. ಈ ವೇಳೆ ಇನ್ನೊಂದು ಬೈಕ್‌ನಲ್ಲಿ ಮಸ್ಕಿಯಿಂದ ಮೌನೇಶ್, ಹನುಮೇಶ್ ಬರುತ್ತಿದ್ದರು. ಮಾರ್ಗ ಮಧ್ಯೆ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.




