ಬಂಟ್ವಾಳ: ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದ ವ್ಯಕ್ತಿಯ ರಕ್ಷಿಸಿದ ಸ್ಥಳೀಯರು
ಬಂಟ್ವಾಳ : ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಮಂಗಳವಾರ ಬೆಳಗ್ಗೆ ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾಗಿದೆ.
ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕ್ಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಅದಕ್ಕಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬಂದು ಸಾಯಲು ಯತ್ನಿಸಿದ್ದರು ಎನ್ನಲಾಗಿದೆ. ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್ ಅವರು ಸುರಕ್ಷಿತವಾಗಿ ದಡಕ್ಕೆ ಕರೆತಂದರು. ಉಪವಾಸವಿದ್ದ ಸಂದರ್ಭ ನಡೆಸಿದ ರಕ್ಷಣಾ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದಿಸಿದ್ದಾರೆ.
ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ ನಂತರ ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




