ಅಕ್ರಮ ಹಣ ವರ್ಗಾವಣೆ ಆರೋಪ: SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ ಸೋಮವಾರ ರಾತ್ರಿ ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಫೈಝಿಯನ್ನು ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ