ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಹಾವೇರಿ: ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದ ಬಳಿ ನಡೆದಿದೆ.
ಉಲ್ಲಾಸ್ ಮುರಳಿ (22) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಉಲ್ಲಾಸ್ ಎಂಜಿನಿಯರಿಂಗ್ 4ನೇ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಒಂದು ವಿಷಯದಲ್ಲಿ ಫೇಲ್ ಆಗಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಗ್ರಾಮಸ್ಥರು ಹಾಗೂ ಪೊಲೀಸರು ಮೃತದೇಹವನ್ನ ಹೊರಗೆ ತೆಗೆಯುವ ಕಾರ್ಯ ಮಾಡಿದ್ದಾರೆ.




