March 18, 2026

ಬಿ.ಸಿ ರೋಡ್: ಖಾಸಗಿ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಗಂಭೀರ

0
image_editor_output_image435180664-1741165528967

ಬಂಟ್ವಾಳ: ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ ರೋಡ್ ಬಳಿ ನಡೆದಿದೆ.

ಬಿ.ಸಿ ರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

ಘಟನೆ ಪರಿಣಾಮ ಕಾರು‌ ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ‌ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!